ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ಆ.15 ರoದು ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಮನೋಹರ್ ಕೇದಳಿಕೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮದ್ದಡ್ಕ ಘಟಕ ಪದಾಧಿಕಾರಿಗಳು ಉಪಸ್ಥಿತರಿದ್ದರು.











