ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿತ ರಕ್ಷಿತ್ ಶೆಟ್ಟಿ ಎಂಬಾತನು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿದ್ದು, ಸದರಿ ಮಾಹಿತಿ ದಿನಾಂಕ:31-07-2025 ರಂದು ಸಾಮಾಜಿಕ ಜಾಲತಾಣದ ಮೂಲಕ ತಿಳಿದುಬಂದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 69/2025, ಕಲಂ:353(1)(ಬಿ), 353(2) ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.











