September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಅಳದಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾಲೇಜು ಪ್ರಾಂಶುಪಾಲರಾದ ಸನ್ನಿ ಕೆಎಂ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಳದಂಗಡಿ ವಲಯದ ಜನಜಾಗೃತಿ ವಲಯಾಧ್ಯಕ್ಷ ನಾರಾಯಣ ಸಾಲ್ಯಾನ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳು ಹದಿಹರೆಯದಲ್ಲಿ ಎಡವದಂತೆ ಜಾಗೃತರಾಗುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು.

ನಾರಾವಿ ಜನಜಾಗೃತಿ ವಲಯಾಧ್ಯಕ್ಷ ನಿತ್ಯಾನಂದ ನಾವರ ರವರು ಮಕ್ಕಳಿಗೆ ಕೆಟ್ಟ ಚಟಗಳಿಗೆ ಬಲಿಯಾಗದಂತೆ ಜಾಗೃತೆ ವಹಿಸುವಂತೆ, ಕೆಟ್ಟ ಹವ್ಯಾಸಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಬಡಗಕಾರಂದೂರು ಎ&ಬಿ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ, ಭಜನಾ ಮಂಡಳಿ ಕಾರ್ಯದರ್ಶಿ ಮಂಜುನಾಥ್ ಆಚಾರ್ಯ, ವಿಪತ್ತು ಘಟಕದ ಸದಸ್ಯ ಯಶೋಧರ ಸುವರ್ಣ, ಮೇಲ್ವಿಚಾರಕಿ ಯಶೋಧ ಎಂ, ಸೇವಾಪ್ರತಿನಿಧಿಗಳಾದ ಶುಭಲತಾ, ಪೂರ್ಣಿಮಾ, ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.

172 ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಮೇಲ್ವಿಚಾರಕಿ ಯಶೋದಾ ಎಂ. ಸ್ವಾಗತಿಸಿ, ಕಾಲೇಜು ಉಪನ್ಯಾಸಕ ಪ್ರಶಾಂತ್ ಶೆಟ್ಟಿ ಧನ್ಯವಾದವಿತ್ತರು. ಒಕ್ಕೂಟದ ನಿಕಟಪೂರ್ವ ಕಾರ್ಯದರ್ಶಿ ಮನೋಹರ್ ನಿರೂಪಿಸಿದರು.

Related posts

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya
error: Content is protected !!