23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಹಾಗೂ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಕಬ್ಸ್-ಬುಲ್ ಬುಲ್, ಸೌಟ್ಸ್-ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ಸಹಯೋಗದಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ಆಚರಿಸಲಾಯಿತು.

ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ. ಸ್ಕಾರ್ಫ್‌ನ ಮಹತ್ವ, ಉಪಯೋಗಳು ಹಾಗೂ ವಿಶ್ವ ಸ್ಕಾರ್ಫ್ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ರೇಂಜರ್ ಲೀಡರ್ ವಸಂತಿ ಅತಿಥಿಗಳಿಗೆ ಸ್ಕಾರ್ಫ್‌ನ್ನು ತೊಡಿಸುವ ಮೂಲಕ ವಿನೂತನ ರೀತಿಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು ಹಾಗೂ ರೋವರ್ಸ್ ರೇಂಜರ್ಸ್ ವಿಭಾಗದ ನೂತನ ಸ್ಕಾರ್ಫ್‌ನ್ನು ಬಿಡುಗಡೆಗೊಳಿಸಲಾಯಿತು.

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಮತಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಸ್ವತಿ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ರೇಂಜರ್ ವಿದ್ಯಾರ್ಥಿಗಳಾದ ಮೋಕ್ಷಿತಾ ಕಾರ್ಯಕ್ರಮ ನಿರೂಪಿಸಿ, ಹೊಂಗಿರಣ ಸ್ವಾಗತಿಸಿ, ಜಲಜಾಕ್ಷಿ ಧನ್ಯವಾದಗೈದರು. ಗೈಡ್ ಕ್ಯಾಪ್ಟನ್ ರೇವತಿ, ಕಬ್ ಮಾಸ್ಟರ್ ಪ್ರೇಮಾ, ಫ್ಲಾಕ್ ಲೀಡರ್ ಭಾರತಿ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!