25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸಹ ಪಠ್ಯ ಚಟುವಟಿಕೆಯಾದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರಸ್ತುತ ಮಣಿಪಾಲ ತಾಂತ್ರಿಕ ಸಂಸ್ಥೆಯಲ್ಲಿ, ‘ಎನರ್ಜಿ ಸ್ಟೋರಡ್ ಡಿವೈಸಸ್ ‘ ವಿಷಯದಲ್ಲಿ ಸಂಶೋಧನಾ ಅಧ್ಯಯನ ಮಾಡುತ್ತಿರುವ ವಿಪಿನ್ ಸಿರಿಯಾಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭೌತ ಶಾಸ್ತ್ರವು ನಮ್ಮ ದಿನ ನಿತ್ಯದ ಒಂದು ಭಾಗವಾಗಿದೆ.ವಿಷಯವನ್ನು ಬಾಯಿಪಾಠ ಮಾಡಿ ಬರೆಯುವ ಬದಲು, ವಿಷಯವನ್ನು ಅರ್ಥಮಾಡಿ ಕೊಂಡು ಬರೆದಾಗ, ಅಂಕಕ್ಕಿಂತ ಮಿಗಿಲಾಗಿ ವಿಷಯದ ಸ್ಪಷ್ಟತೆ ಮತ್ತು ಆ ವಿಷಯದ ಆಳ, ಅದರ ವ್ಯಾಪ್ತಿಯ ಬಗ್ಗೆ ನಮ್ಮ ಜ್ಞಾನ ಬೆಳೆಯುತ್ತದೆ ಅದರ ಮೂಲಕ ನಾವು ಸಮಾಜಕ್ಕೆ ನಮ್ಮದೇ ಕೊಡುಗೆ ನೀಡಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ, ಮಾತನಾಡಿ ಇವತ್ತು ವಿದ್ಯಾರ್ಥಿಗಳಿಗೆ ತಮ್ಮ ಜೀವನ ರೂಪಿಸಿಕೊಳ್ಳಲು ಹತ್ತು-ಹಲವಾರು ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳಿದ್ದು ಅದಕ್ಕೆ ಬೇಕಾದ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಪ್ರಯತ್ನಿಸಿದಾಗ ಮಾತ್ರ ನೀವು ಅಂದುಕೊಂಡ ಗುರಿ ಮತ್ತು ಕ್ಷೇತ್ರ ದಲ್ಲಿ ಸಾಧಿಸಬಹುದು ಎಂದು ನುಡಿದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಈ ವರ್ಷದ ಸ್ಪೆಕ್ಟ್ರಾ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳಿಗೆ ಹೂ ಕೊಟ್ಟು ಅವರನ್ನು ಅಸೋಸಿಯೇಷನ್ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಹುರಿದುಂಬಿಸಲಾಯಿತು.

ವೇದಿಕೆಯ ಮೇಲೆ ವಿಭಾಗ ಮುಖ್ಯಸ್ಥ ತಿರುಮಲ ಪ್ರಸಾದ್ ಸಿ ಹೆಚ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಭಾಗದ ಉಪನ್ಯಾಸಕರುಗಳು ಮತ್ತು ಸ್ಪೆಕ್ಟ್ರಾ ಅಸೋಸಿಯೇಷನ್ ನ ಸದಸ್ಯರು ಉಪಸ್ಥಿತರಿದ್ದರು.
ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳಾದ ಕ್ಷಿಪ್ರ ಪ್ರಸಾದ್ ಸ್ವಾಗತಿಸಿ, ತನುಶ್ರೀ ಟಿ ಪಿ, ವಂದಿಸಿ, ಭವಿಷ್ಯ ರಾಣಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya
error: Content is protected !!