March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ರೋಟರಿ ಕ್ಲಬ್ ಬೆಳ್ತಂಗಡಿ, ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಆಯೋಜಿಸಲ್ಪಟ್ಟ “ಹಸಿರೇ ಉಸಿರು” ಏಕ್ ಪೆಡ್ ಮಾ ಕೆ ನಾಮ್
1000 ಸಸಿಗಳ ವಿತರಣೆ ಮತ್ತು ನೆಡುವಿಕೆ ಕಾರ್ಯಕ್ರಮವು ಉಜಿರೆ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ನೆರವೇರಿಸಿದರು.

ಅಧ್ಯಕ್ಷತೆಯನ್ನು ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಪ್ರಕಾಶ್ ಪ್ರಭು, ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಇದರ ಸಂಯೋಜಕ ಮೋಹನ್ ಕುಮಾರ್ ಕೆ., ಬೆಳ್ತಂಗಡಿ ಡಿಆರ್ ಎಫ್ ಓ ಕಿರಣ್ ಪಾಟೀಲ್, ಎನ್ಎಸ್ಎಸ್ ಕಾರ್ಯಕ್ರಮ ಸಹ ಯೋಜನಾಧಿಕಾರಿ ಮಾಲಿನಿ ಅಂಚನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಗಿಡ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬೀಟ್ ಫಾರೆಸ್ಟ್ ಪರಮೇಶ್ವರ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಎಸ್ ಡಿ ಎಂ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ನಾಯಕರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

ಸ್ವಯಂ ಸೇವಕರು ಪ್ರಾರ್ಥಿಸಿದರು . ರಾಷ್ಟೀಯ ಸೇವಾ ಯೋಜನೆ ಯೋಜನಾಧಿಕಾರಿ ಮಹೇಶ್ ಕುಮಾರ್ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು.

Related posts

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya
error: Content is protected !!