September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ.

ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮೀನು ಹಿಡಿಯದಂತೆ ಸರಕಾರ ನಿಷೇಧವನ್ನು ಮಾಡಿದೆ. ಇದರಿಂದಾಗಿ ಈ ಪ್ರದೇಶಕ್ಕೆ ಯಾರೂ ಮೀನು ಹಿಡಿಯಲು ಬರುವುದಿಲ್ಲ. ಆದರೆ ಆ.1 ರಂದು ರಾತ್ರಿ ಸುಮಾರು 10 ಗಂಟೆ ರಾತ್ರಿ ಅನ್ಯಮತೀಯರಿಬ್ಬರು ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದಿದ್ದರು. ರಾತ್ರಿ ನದಿ ಬದಿಯಲ್ಲಿ ಲೈಟ್ ಹಾಕುತ್ತಿರುವುದನ್ನು ಕಂಡ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ಇಬ್ಬರು ಮೀನು ಹಿಡಿಯಲು ಬಂದಿರುವುದು ಕಂಡು ಬಂದಿತ್ತು. ವಿಚಾರಿಸಿದಾಗ ತಾವು ಬಂದಾರು, ಕುಪ್ಪೆಟ್ಟಿಯಿಂದ ಮೀನು ಹಿಡಿಯಲು ಬಂದಿರುವುದಾಗಿ ತಿಳಿಸಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!