22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2023 ಹಾಗೂ 24 ರ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಹದಿನೇಳು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವು ಅವರ ಬ್ಯಾಂಕ್ ಖಾತೆಗಳಿಗೆ ಬಂದಿದ್ದು, ಒಟ್ಟು ಒಂದು ಲಕ್ಷದ ಎರಡು ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya
error: Content is protected !!