ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಬೆಳ್ತಂಗಡಿ ಯಕ್ಷ ಸಂಭ್ರಮ ಮತ್ತು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ನೇತೃತ್ವದಲ್ಲಿ ಮಹಿಳಾ ಯಕ್ಷ ಸಂಭ್ರಮದ ಉದ್ಘಾಟನೆಯು ಆ.2ರಂದು ಉಜಿರೆ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಯು. ಶರತ್ ಕೃಷ್ಣ ಪಡ್ವೆಟ್ನಾಯ ರವರು ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನೆಯನ್ನು ನೆರವೇರಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಬೆಳಿಗ್ಗೆ 10ರಿಂದ ಪ್ರಾರಂಭವಾದ ಚೌಕಿ ಪೂಜೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದು ಶುಭಹಾರೈಸಿದರು. ಬಳಿಕ ಮಂಗಳೂರು ಮಹಾದೇವ ಯಕ್ಷ ಕಲಾ ತಂಡ ದಿಂದ ಪೂರ್ವರಂಗ, ಯಕ್ಷ ಕಲಾ ಸಂಗಮದಿಂದ ಅಬ್ಬರದ ಚೆಂಡೆ ನಡೆಯಿತು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಯಕ್ಷಗಾನ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ. ನಾಗೇಶ್ ಕುಮಾರ್ ಗೌಡ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಮಿತಾ, ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟರ್ ನಮ್ರತಾ ಎನ್., ಉಜಿರೆ ಸಹಕಾರ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ, ಉದ್ಯಮಿ ಮೋಹನ ಶೆಟ್ಟಿಗಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ರಾಘವ ಹೆಚ್. ರಾಜೇಶ್ ಕುಳಾಯಿ, ಗುರುರಾಜ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ. ಬೆಳಾಲು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ, ರಾಜೇಂದ್ರ ಎಕ್ಕಾರ್ ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!