September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

ತುಂಬೆತಡ್ಕ : ಸೇವಾಭಾರತಿ , ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆ. 02 ರಂದು ರಾಣೆಯರ್ ಸಭಾಭವನ ತುಂಬೆತಡ್ಕದಲ್ಲಿ ನಡೆಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಎಂ.ಎಸ್‌ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಸಂಸ್ಥೆಯ ಖಜಾಂಚಿ ಮತ್ತು ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಮಾತನಾಡಿ ಯಾವುದೇ ವಿದ್ಯೆಯಾದರು ನಮಗೆ ಅದು ಎಂದಿಗೂ ಶಾಶ್ವತ. ಮಹಿಳೆಯರು ಯಾವ ವಿಷಯದಲ್ಲೂ ಹಿಂದುಳಿಯದೆ ಸ್ವಾವಲಂಬಿ ಜೀವನವನ್ನು ಮಾಡುತ್ತ ಮುನ್ನಡೆಯುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಪ್ರತಿಮಾ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಸಂಸ್ಥೆಯ ಪರವಾಗಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಶ್ರೀಮತಿ ಪ್ರತಿಮಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಅರಸಿನಮಕ್ಕಿ, ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ನೀತಾ ರಾಧೇಶ್ ಆಚಾರ್ಯರವರು ಸೇವಾಭಾರತಿ ಸಂಸ್ಥೆಯ ಜೊತೆ ಕೈ ಜೋಡಿಸಿ ಅರಸಿನಮಕ್ಕಿ, ನೆಲ್ಯಡ್ಕ ಹಾಗೂ ತುಂಬೆತಡ್ಕದಲ್ಲಿ ಸತತ 3 ಶಿಬಿರದ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು 91 ಮಂದಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಕಾರಣಿಕರ್ತರಾಗಿದ್ದಾರೆ ಇವರಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ನಿರ್ದೇಶಕರಾದ ಶ್ರೀಮತಿ ಬೇಬಿ, ಬೆಳ್ತಂಗಡಿ LIC of INDIA, Developement Officer ಉದಯಶಂಕರ್ ಕೆ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಚಂದ್ರ, ನಿವೃತ್ತ ಯೋಧರು ಕೆ. ಮಹಾಬಲ ತುಂಬೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 31 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಮತಿ ವೇದಾವತಿ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಆಶಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಅಲ್ಪಾವಧಿಯಲ್ಲಿ ದೊರೆತ ಅವಕಾಶ ಸದ್ಭಳಕೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರು ಬಿ.ಸಿ ನಾಗೇಶ್ :ಶಾಸಕ ಹರೀಶ್ ಪೂಂಜ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya
error: Content is protected !!