25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಹೊಸಂಗಡಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ, ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ವೇದಮೂರ್ತಿ ಶ್ರೀರಾಮ ದಾಸ ಆಶ್ರನ್ನ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪಡ್ಯಾರ ಬೇಟ್ಟು ಅನುವಂಶಿಯ ಆಡಳಿತದಾರರಾದ ಎ ಜೀವಂದರ್ ಕುಮಾರ್ ರವರು ಸಭಾ ಅಧ್ಯಕ್ಷತೆಯನ್ನು ವಹಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯ ಉದ್ದೇಶ ಹಾಗೂ ಅದರಿಂದ ಆಗಿರುವಂತಹ ಸಾಮಾಜಿಕ ಬದಲಾವಣೆಯ ಬಗ್ಗೆ ಹಾಗೂ ಪೂಜ್ಯರು ಜನರಿಗೆ ಕೊಟ್ಟಿರುವ ಸಹಕಾರದ ಬಗ್ಗೆ ಮನನ ಮಾಡಿದರು.

ಧಾರ್ಮಿಕ ಉಪನ್ಯಾಸಕಿ ಶ್ರೀಮತಿ ಅನಿತಾ ಶೆಟ್ಟಿ ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಅದರ ಆಚರಣೆಯಿಂದ ಆಗುವ ಬದಲಾವಣೆಯ ಬಗ್ಗೆ ಮಹಿಳೆಯರಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು

ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಆನಂದ ಬಂಗೇರ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ವಸಂತಿ ಹಾಗೂ ಒಕ್ಕೂಟದ ಅಧ್ಯಕ್ಷ ರೋಹಿತ್ ಹಾಗೂ ದಿನಕರ್ ಉಪಸ್ಥಿತರಿದ್ದರು . ಮೇಲ್ವಿಚಾರಕಿ ಶ್ರೀಮತಿ ವೀಣಾ ಸ್ವಾಗತಿಸಿದರು. ಕಾರ್ಯದರ್ಶಿಯಾದ ಸೌಮ್ಯ ವರದಿ ವಾಚಿಸಿದರು. ವೇಣೂರು ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಧನ್ಯವಾದ ಮಾಡಿದರು.

Related posts

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya
error: Content is protected !!