Uncategorized

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4 ರಂದು ತಣ್ಣೀರುಪಂತ ಪ್ಯಾಕ್ಸ್ ನ ಕನಸು ರೈತ ಸಭಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಮಾತನಾಡಿ ಅನೇಕ ವರ್ಷಗಳ ಬಳಿಕ ಸಹಕಾರ ಭಾರತಿ ತಣ್ಣೀರುಪಂತ ಪ್ಯಾಕ್ಸ್ ನ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ. ಚುನಾವಣೆಯಲ್ಲಿ ೧೨ ಅಭ್ಯರ್ಥಿಗಳು ಜಯ ಗಳಿಸಲು ಹಿರಿಯ ಕಾರ್ಯಕರ್ತರ ಬದ್ದತೆ ಹಾಗೂ ಯುವ ಕಾರ್ಯಕರ್ತರು ಅವಿರತ ಪರಿಶ್ರಮಕ್ಕೆ‌ ಅಭಿವಂದನೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್ , ಉಪಾಧ್ಯಕ್ಷ ಸುನಿಲ್ ಅಣವು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಚುನಾವಣಾ ಪ್ರಭಾರಿ ಪ್ರವೀಣ್ ರೈ, ತಣ್ಣೀರುಪಂತ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ,ನಿರ್ದೇಶಕರಾದ ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, ಪ್ರಭಾಕರ್ ಪೊಸೊದೊಂಡಿ, ಜಯಂತಿ ಪಾಲೇದು, ಸರೋಜಿನಿ, ರಜನಿನಾಥ್ ಮುಂದಿಲ, ಸುರೇಶ್ ಹಾಗೂ ಶ್ರೀನಿವಾಸ್, ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

ಬೊಮ್ಮಯ್ಯ ವಂದೇ ಮಾತರಂ ಗೀತೆಯನ್ನು ಹಾಡಿದರು.ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಕೇಸರಿ ಶಾಲು ಹೊದಿಸಿ ಅಭಿನಂದಿಸಲಾಯಿತು.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya
error: Content is protected !!