ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2025-26 ನೇ ಸಾಲಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ ಪ್ರೌಢಶಾಲಾ, ಕಾಲೇಜು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಆ. 02 ರಂದು ನಡೆಯಿತು.ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಆಯ್ಕೆಯಾದರು.ಶಾಲಾ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಅಯ್ಕೆಗೊಂಡರು. ಅದೇ ರೀತಿ ಉಪಾಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪೀಠೋಪಕರಣ ನೀಡಿ ಸಹಕರಿಸಿದ ಚಂದ್ರ ಶೇಖರ ಇವರಿಗೆ ಗೌರವಿಸಲಾಯಿತು.

ರಷ್ಯಾದಲ್ಲಿ ಎಂ ಬಿ ಬಿ ಎಸ್ ಮಾಡುತ್ತಿರುವ ಶಾಲಾ ಹಳೆ ವಿದ್ಯಾರ್ಥಿ ಪೂಜಿತ್ ಕುಲಾಲ್ ಇವರು ಮಕ್ಕಳಿಗೆ ಮೊಬೈಲ್ ನೀಡದೆ ಅವರ ಉತ್ತಮ ಭವಿಷ್ಯ ವನ್ನು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪೋಷಕರಿಗೆ ಕಿವಿ ಮಾತು ನೀಡಿದರು.

ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಕುಂಭಶ್ರೀಯು ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರ ಸಹಕಾರವೇ ಕಾರಣ ಎಂದರು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ, ಮಾಜಿ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಾತ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಶ್ರೀಮತಿ ಶುಭ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ ಸುಮನ್ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ವೇತ ಬಿ ವಂದಿಸಿದರು.

Related posts

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya
error: Content is protected !!