22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

ಧರ್ಮಸ್ಥಳ: ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. : ೬ ಕಾರನ್ನು (ಕೆ.ಎ. ೨೧ ಎಂ.ಎ.- ೬೦೩೩) ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್‌ಖಾನೋಲ್ಕರ್ ಆ.3ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದರು.


ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದರು.


ಕಂಪೆನಿಯ ಉದಾರ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.

ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ. ದೇಶದ ಸೇನೆಯ ವಿಭಾಗಕ್ಕೂ ಅವರು ವಾಹನಗಳನ್ನು ಪೂರೈಸುತ್ತಿದ್ದು, ತನ್ಮೂಲಕ ದೇಶಸೇವೆಗೂ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರು ಕಂಪೆನಿಯ ವ್ಯವಹಾರದಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.
ಬಳಿಕ ಹೆಗ್ಗಡೆಯವರು ಕಾರನ್ನು ಚಾಲನೆ ಮಾಡಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಅಮಿತ್ ಮತ್ತು ಶ್ರದ್ಧಾಅಮಿತ್ ಉಪಸ್ಥಿತರಿದ್ದರು.

Related posts

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya
error: Content is protected !!