September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಗಾರ್ಡಿಯನ್ ಏಂಜೆಲ್ಸ್ ಹಿರಿಯ ಪ್ರಾಥಮಿಕ ಶಾಲೆ , ಮಡಂತ್ಯಾರು ಇವರ ಪ್ರಾಯೋಜಕತ್ವದಲ್ಲಿ ಆಗಸ್ಟ್ ೨ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14 ರ ವಯೋಮಾನದ ಪ್ರಾಥಮಿಕ ಹಂತದ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಜೇವಿಸ್ ಡಿಕುನ್ಹಾ, ಜೀತನ್ ಸಿಕ್ವೇರಾ, ಜಿಯಾನ್ ಸಿಕ್ವೇರಾ, ಕೌಶಿಕ್ ಮತ್ತು 8ನೇ ತರಗತಿಯ ಸಿಂಚನ್ ಹಾಗೂ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ವಿದ್ಯಾರ್ಥಿಗಳಾದ ಹನಿ, ಲಕಿತಾ, ಸ್ವೀಡಲ್ ರೊಡ್ರಿಗಸ್ ಮತ್ತು ೮ನೇ ತರಗತಿಯ ಅನ್ಯ ಪಿ ಜೈನ್ , ಆದ್ಯ ಜೆ ರವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya
error: Content is protected !!