September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಕೋಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓಂ ಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಕೋಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ದೀಪ ಬೆಳಗಿಸಿ ಉದ್ಘಾಟಿಸಿ ಹಿಂದಿನ ಕಾಲದಲ್ಲಿ ಬಡತನವಿದ್ದು ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುತ್ತಿದ್ದು ಆರೋಗ್ಯವಂತರಾಗಿರುತ್ತಿದ್ದರು. ಈಗಿನ ಕಾಲದಲ್ಲಿ ನಾವುಗಳು ಆಟಿ ತಿಂಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸುವುದರ ಮೂಲಕ ಹಿಂದಿನ ಕಾಲದ ಆಹಾರ ಪದ್ಧತಿಯನ್ನು ನೆನಪು ಮಾಡಿಕೊಳ್ಳುತ್ತಿದ್ದೇವೆ ಪೌಷ್ಟಿಕ ಆಹಾರದೊಂದಿಗೆ ತಯಾರಿಸುವ ವಿಧಾನ ಸ್ವಚ್ಛತೆ ಕೂಡ ಪ್ರಾಮುಖ್ಯವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಷಾ ವಿ ನಾಯಕ್ ರವರು ಪ್ರತಿಯೊಂದು ಸೊಪ್ಪು ತರಕಾರಿಯಲ್ಲಿರುವಂತಹ ಪೌಷ್ಟಿಕಾಂಶಗಳು ಮತ್ತು ತಯಾರಿಸುವ ವಿಧಾನಗಳು ಹಿಂದಿನ ಕಾಲದವರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸಿ ಆರೋಗ್ಯವಂತರಾಗಿರುತ್ತಿದ್ದರು. ಸುತ್ತಮುತ್ತ ಸಿಗುವಂತಹ ಸೊಪ್ಪು ತರಕಾರಿಗಳನ್ನ ಬಳಸಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.

ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಯಶೋಧರ್ ಮಾತನಾಡಿ ಹೇಮಾವತಿ ವೀ. ಹೆಗ್ಗಡೆಯವರು ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಈ ದಿನ ಪೌಷ್ಟಿಕ ಆಹಾರ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಹಮ್ಮಿಕೊಂಡಿದ್ದು ಆಟಿ ತಿಂಗಳ ವಿಶೇಷತೆಯ ಬಗ್ಗೆ ಹಾಗೂ ಪೌಷ್ಟಿಕಾಂಶವು ಆಹಾರವನ್ನು ನಾವು ಪ್ರತಿದಿನ ಬಳಸುವಂತೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಲಕ್ಷ್ಮಿ ವಹಿಸಿದರು. ಸೇವಾ ಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ , ಕಮಲ ಧನ್ಯವಾದ ನೀಡಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸದಸ್ಯರು ವಿವಿಧ ಖಾದ್ಯಗಳನ್ನು ತಯಾರಿಸಿ ತಂದು ಅದರಲ್ಲಿರುವ ಪೌಷ್ಟಿಕಾಂಶ ಮತ್ತು ತಯಾರಿಸುವ ವಿಧಾನದ ಬಗ್ಗೆ ತಿಳಿಸಿದರು.

Related posts

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!