September 6, 2026
Uncategorized

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

ಬೆಳ್ತಂಗಡಿ: ತಾಲೂಕು ಪಂಚಾಯತಿ ಬೆಳ್ತಂಗಡಿ ಮತ್ತು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ಇವರ ಸಹಯೋಗದಲ್ಲಿ ಅಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರವು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಜರಗಿತು.

ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಿತಿ ಸದಸ್ಯ ಕಾರ್ಯದರ್ಶಿಯವರಾದ ಭವಾನಿಶಂಕರ್‌ ಎನ್‌ ಉಪಸ್ಥಿತಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಪದ್ಮನಾಭ ಸಾಲ್ಯಾನ್‌ ರವರು ಶಿಬಿರವನ್ನು ಉದ್ಘಾಟಿಸಿದರು.

ಬೆಸ್ಟ್‌ ಫೌಂಡೇಶನ್‌ ಅಧ್ಯಕ್ಷ ರಕ್ಷಿತ್‌ ಶಿವರಾಂ ರವರು ಕಾರ್ಯಕ್ರಮಕ್ಕೆ ಶುಭಕೋರಿದರು. ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿಯ ಉಪಾಧ್ಯಕ್ಷ ಶೇಖರ್‌ ಕುಕ್ಕೇಡಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಸುರೇಶ್‌ ವಿಟ್ಲ, ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ಮಾರ್ಕೆಟಿಂಗ್‌ ಮ್ಯಾನೇಜರ್‌ ಗುರುಪ್ರಸಾದ್‌, ಯುವನಿಧಿ ಯೋಜನೆಯ ಜಿಲ್ಲಾ ತರಬೇತುದಾರರಾದ ಶ್ರೀಮತಿ ಮಂಜೂಷಾ ಹಾಗೂ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು, ಸೌಮ್ಯ ಲಾಯಿಲ, ಮರಿಟಾ ಪಿಂಟೋ, ಶರೀಫ್‌ ಸಬರಬೈಲು, ಸತೀಶ್‌ ಹೆಗ್ಡೆ ವೇಣೂರು, ವಿಜಯ ಗೌಡ, ವಂದನಾ ಭಂಡಾರಿ, ವೀರಪ್ಪ ಮೊಯ್ಲಿ, ಕೇಶವ ನಾಯ್ಕ, ತಾಲೂಕು ಪಂಚಾಯತ್‌ ಅಧೀಕ್ಷಕರಾದ ಪ್ರಶಾಂತ್‌ ಡಿ ಬಳಂಜ ಮತ್ತು ನೋಡೆಲ್‌ ಅಧಿಕಾರಿಯಾದ ಹೆರಾಲ್ಡ್‌ ಸ್ವಿಕ್ವೇರಾ ಇವರು ಉಪಸ್ಥಿತರಿದ್ದರು.

ಅಂಚೆ ಇಲಾಖೆಯ ಮೇಲಂತಬೆಟ್ಟು ಶಾಖಾ ಅಂಚೆ ಮೇಲ್ವಿಚಾರಕರಾದ ಕುಮಾರಿ ಚೈತ್ರ, ಕೊಯ್ಯೂರು ಶಾಖಾ ಅಂಚೆ ಮೇಲ್ವಿಚಾರಕರಾದ ಕುಮಾರಿ ಸಂತೃಪ್ತಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ನಡೆಸಿಕೊಟ್ಟರು.ಸುಮಾರು ನೂರಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗವಹಿಸಿ ಅಧಾರ್‌ ನೊಂದಣಿ ಮತ್ತು ತಿದ್ದುಪಡಿಯನ್ನು ಮಾಡಿಸಿಕೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Related posts

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya
error: Content is protected !!