March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಆ.2ರಂದು ಪೂರ್ವಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೋ ಅವರು ವಹಿಸಿದ್ದರು. ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ, ಹಾಗೂ, ಶಿಕ್ಷಕಿ ಗ್ರೇಸಿ ಸಾಲ್ದಾನ ಅವರು ಉಪಸ್ಥಿತರಿದ್ದರು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .

ಕಾರ್ಯಕ್ರಮದಲ್ಲಿ ಮಕ್ಕಳ ಪಠ್ಯ – ಪಠ್ಯೇತರ ಚಟುವಟಿಕೆಗಳ ಬಗ್ಗೆ ತರಗತಿಯ ಶಿಕ್ಷಕಿಯರಾದಂತಹ ಗೀತಾ, ವಿನ್ನಿ ಹಾಗೂ ಅಕ್ಷತರವರು ವಿವರಿಸಿದರು. ಹಾಗೆ ಶಾಲಾ ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಪೋಷಕರಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹಾಗೂ ಪೋಷಕರು ಮಾಡಬೇಕಾದ ಕೆಲವು ಜವಾಬ್ದಾರಿಗಳನ್ನು ತಿಳಿಸಿಕೊಟ್ಟರು.

ಪೋಷಕರ ಅನಿಸಿಕೆ ಸಲಹೆ ಸೂಚನೆಯನ್ನು ಕೇಳಲಾಯಿತು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಗ್ರೇಸಿ ಸಲ್ದಾನ ವಂದಿಸಿದರು. ಶಿಕ್ಷಕಿ ಪ್ರಣಿತಾ ಡಿಸೋಜ ಸಹಕರಿಸಿದರು.

Related posts

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!