ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಬಳಂಜ : ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಿಂತನೆ ವೃದ್ಧಿಯೊಂದಿಗೆ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 4 ಮತ್ತು 5ನೇ ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರು ಮತ್ತು ಪ್ರೌಢಶಾಲಾ ವಿಭಾಗದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷ ವಸಂತ ಸಾಲಿಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಯಲ್ಲಿ ಇಂತಹ ಕಾರ್ಯಗಾರವನ್ನು ಹಮ್ಮಿಕೊಂಡಿರುವ ಮೈಟ್ ಕಾಲೇಜಿನ ಮುಖ್ಯಸ್ಥರನ್ನು ಹಾಗೂ ವಿದ್ಯಾರ್ಥಿಗಳನ್ನು ಪ್ರಶಂಸಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಶಿಕ್ಷಣ ಟ್ರಸ್ಟ್ (ರಿ) ಬಳಂಜ ಇದರ ನಿರ್ದೇಶಕ ಪ್ರಮೋದ್ ಕುಮಾರ್ ಜೈನ್ ಮಾತನಾಡಿ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಾಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಮೈಟ್ ಕಾಲೇಜಿನ ಆಡಳಿತ ಮಂಡಳಿಗೆ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ಮೈಟ್ ಕಾಲೇಜಿನ ಉಪನ್ಯಾಸಕ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಾಗಾರದ ಬಗ್ಗೆ ವಿವರಣೆಯನ್ನು ನೀಡಿದರು. ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿಯವರು ಉಪಸ್ಥಿತರಿದ್ದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಕೃತಿಕಾ, ಪ್ರಶಸ್ತ, ನಿಶಿಕಾ, ತೀರ್ಥಶ್ರೀ, ಶೀತಲ್ ರಶ್ಮಿ, ಸಹೀಮಾ, ಜೋಸ್ವಿನ್, ಸಂಕೇತ್ ,ಶ್ರೀರಾಮ್, ಸುಕ್ಷಿತ್, ಅಕ್ಷಯ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಆಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಕೆ ಸ್ವಾಗತಿಸಿದರು. ಅಧ್ಯಾಪಕಿ ಶ್ರೀಮತಿ ವೀಣಾ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು .

Related posts

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya
error: Content is protected !!