ರೆಖ್ಯ : ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರಿಗೆ ತೀವ್ರ ತರದ ಗಾಯವಾದ ಘಟನೆ ಆ. 5ರಂದು ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಡೆದಿಲ್ಲ ಎಂದು ರೆಖ್ಯ ಗ್ರಾಮಸ್ಥರು ಹಲವು ಸಮಯಗಳಿಂದ ದೂರುತ್ತಿದ್ದಾರೆ. ಈ ಪ್ರದೇಶದಲ್ಲಿ ಪ್ರತಿನಿತ್ಯ ಅಪಘಾತವಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಇನ್ನಾದರೂ ಎಚ್ಚೆತ್ತುಕೊಂಡು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿದ್ದಲ್ಲಿ ಮುಂದೆ ನಡೆಯುವ ಅದೆಷ್ಟು ಅಪಘಾತಗಳನ್ನು ತಪ್ಪಿಸಬಹುದೆಂಬುದು ರೆಖ್ಯ ಗ್ರಾಮಸ್ಥರ ಆಗ್ರಹಿಸಿದ್ದಾರೆ.











