ಗುರುವಾಯನಕೆರೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುರುವಾಯನಕೆರೆ ಇದರ 25 ವರ್ಷ ಅಧ್ಯಕ್ಷರಾಗಿದ್ದು, ಪ್ರಸ್ತುತ ನಿರ್ದೇಶಕರಾಗಿರುವ ಭಗೀರಥ.ಜಿ ರವರು ಪ್ರತಿಷ್ಠಿತ ಶ್ರೀ ಗುರುದೇವ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಗ್ಗೆ ಗುರುವಾಯನಕೆರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಆ.5 ರಂದು ಆಡಳಿತ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾರಾಯಣ ರಾವ್, ಉಪಾಧ್ಯಕ್ಷ ವಡಿವೇಲು ಮತ್ತು ನಿರ್ದೇಶಕರಾದ ಅನಂತರಾಜ್ ಜೈನ್, ಪುರಂದರ ಶೆಟ್ಟಿ ಪಾಡ್ಯಾರು, ಮೋಹನ ನಾಯ್ಕ, ಸಚಿನ್ ಕುಮಾರ್, ಶ್ರೀಮತಿ ಜಯಂತಿ, ಅರುಣ್ ಕುಮಾರ್, ಡಿ.ಸಿ.ಸಿ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರವಿಕಲಾ ಎನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.











