37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

ಧರ್ಮಸ್ಥಳ: ಪ್ರತಿಷ್ಠಿತ ಕುಟುಂಬದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಗುಂಪೊಂದು ಪಾಂಗಾಳ ರಸ್ತೆಯ ಸಮೀಪ ಯೂಟ್ಯೂಬರ್ಸ್ ಮೇಲೆ ಆ. ೬ರಂದು ಸಂಜೆ ಹಲ್ಲೆ ನಡೆಸಿದ ಹಾಗೂ ಧಮ೯ಸ್ಥಳ ಗ್ರಾಮಸ್ಥರು ನ್ಯಾಯಕ್ಕಾಗಿ ಒತ್ತಾಯಿಸಿ ಧಮ೯ಸ್ಥಳ ಠಾಣೆಯ ಎದುರು ಧರಣಿ ನಡೆಸಿದ ಘಟನೆ ಆ.6ರಂದು ರಾತ್ರಿ ನಡೆದಿದೆ.

ಹಲ್ಲೆಗೊಳಗಾದ ಯೂಟ್ಯೂಬ್ ವರದಿಗಾರರು ಹಾಗೂ ಖಾಸಗಿ ನ್ಯೂಸ್ ಚಾನೆಲ್ ನ ವರದಿಗಾರನ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಧರ್ಮಸ್ಥಳದಲ್ಲಿ ಎಸ್ ಐ ಟಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ವರದಿ ಮಾಡಲು ಬಂದ ಸಂಚಾರಿ ಸ್ಟುಡಿಯೋದ ಸಂತೋಷ್ ಕುಮಾರ್, ಕುಡ್ಲ ರಾಂಪೇಜ್‌ನ ಅಜಯ್ ಅಂಚನ್ ಹಾಗೂ ಯುನೈಟೆಡ್ ಮೀಡಿಯದ ಅಭಿಷೇಕ್ ಎಂಬವರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾದವರು. ಇನ್ನೊಂದು ಕಡೆ ಖಾಸಗಿ ಚಾನೆಲ್ ವರದಿಗಾರನ ಹಲ್ಲೆಗೆ ಒಳಗಾಗಿ ಆಸ್ಪತ್ರೆ ಗೆ ದಾಖಲಿಸಿದ್ದರು.

ಪ್ರತಿಷ್ಠೀತ ಕುಟುಂಬದ ಬಗ್ಗೆ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ‌ ಎಂದು ಆರೋಪಿಸಲಾಗಿದ್ದು, ಸ್ಥಳದಲ್ಲಿ ಎರಡು ಕಡೆಯವರು ಜಮಾಯಿಸಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿ ಸಾಧ್ಯವಾಗದೆ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.ಘಟನಾ ಸ್ಥಳದಲ್ಲಿ ಎರಡು ವಾಹನಗಳಿಗೆ ಹಾನಿಯಾಗಿದೆ. ನಂತರ ತಮಗೆ ನ್ಯಾಯ ಒದಗಿಸುವಂತೆಧರ್ಮಸ್ಥಳ ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಕುಳಿತು ಧರಣಿ ನಡೆಸಿದರು.

ಜಮಾಯಿಸಿದ ಜನರು ದಿಕ್ಕಾರ ಘೋಷಣೆಗಳನ್ನು ಹಾಕಿದರು. ಸ್ಥಳಕ್ಕೆ ಎಸ್.ಪಿಯವರು ಬರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು, ದ.ಕ ಎಸ್ಪಿಯವರು ಆಗಮಿಸಿ ಮಾತುಕತೆ ನಡೆಸಿದರು. ಬಳಿಕ ಉಜಿರೆ ಖಾಸಗಿ ಆಸ್ಪತ್ರೆಗೆ ಎಸ್.ಪಿಯವರು ಭೇಟಿ ನೀಡಿದರು.

ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ ಎಂದುಎಸ್.ಪಿ ಅವರು ಮಾಹಿತಿ ನೀಡಿದ್ದಾರೆ.

ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಅವರುಗಳ ಎರಡು ವಾಹನಗಳಿಗೆ ಹಾನಿ‌ ನಡೆಸಿದ ಬಗ್ಗೆ ಹಾಗೂ ಖಾಸಗಿ ನ್ಯೂಸ್ ಚಾನೆಲ್ ನ ವರದಿಗಾರನ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗುತ್ತಿದೆ.

ಧರ್ಮಸ್ಥಳ ಪಾಂಗಾಳದಲ್ಲಿ (ಲಾಠಿ ಚಾರ್ಜ್ ನಡೆದ ಸ್ಥಳದಲ್ಲಿ), ಧರ್ಮಸ್ಥಳ ಪೊಲೀಸ್ ಠಾಣಾ ಆವರಣದಲ್ಲಿ ಮತ್ತು ಆಸ್ಪತ್ರೆಯ ಮುಂದೆ ಕಾನೂನುಬಾಹಿರ ಗುಂಪು ಸೇರಿರುವ ಬಗ್ಗೆ ಪ್ರಕರಣ ದಾಖಲಿಸಲಾಗುತ್ತಿದೆ.ಹಲ್ಲೆಗೊಳಗಾದವರು ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ವೈದ್ಯರೊಂದಿಗೆ ವಿಚಾರಿಸಲಾಗಿ, ಪ್ರಾಥಮಿಕ ಆರೋಗ್ಯ ತಪಾಸಣೆಯಲ್ಲಿ ಯಾವುದೇ ಗಂಭೀರ ಗಾಯಗಳಾಗಿರುವುದು ಕಂಡುಬಂದಿಲ್ಲ ಎಂಬುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ.

ಈ ದಿನ ನಡೆದ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದುಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!