ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

ಬೆಳ್ತಂಗಡಿ: ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಮೈಸೂರು ಇದರ ವತಿಯಿಂದ ಆ.16 ರಿಂದ ಆ.18ರವರೆಗೆ ಮೈಸೂರಿನಲ್ಲಿ ನಡೆಯಲಿರುವ `ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ಕೆ. ಅವರು ಆಯ್ಕೆಯಾಗಿದ್ದಾರೆ.

ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯು ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ವಿಷಯದ ಕುರಿತು ನಾಲ್ಕು ದಿನಗಳ ತರಬೇತಿಯನ್ನು ನೀಡಲಿದ್ದು, ಸದರಿ ತರಬೇತುದಾರರ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ತರಬೇತಿ ನೀಡುವ ಸಾಮರ್ಥ್ಯ ಹೊಂದಿರುವ ಮತ್ತು ಸಂವಹನ ಕೌಶಲ್ಯವಿರುವ ಒಬ್ಬರು ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ದ.ಕ ಜಿಲ್ಲಾ ಪಂಚಾಯತಿಗೆ ಪತ್ರ ಬಂದಿದ್ದು, ದ.ಕ ಜಿಲ್ಲಾ ಪಂಚಾಯತ್ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಅನಿತಾ ಕೆ. ಇವರನ್ನು ಆಯ್ಕೆ ಮಾಡಿದೆ. ದ.ಕ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಮಹಿಳಾ ಅಧ್ಯಕ್ಷೆ ಎಂಬ ಕೀರ್ತಿಗೆ ಅನಿತಾ ಕೆ. ಅವರು ಪಾತ್ರರಾಗಿದ್ದು, ಅವರು ತರಬೇತಿಯಲ್ಲಿ ಭಾಗವಹಿಸಲಿದ್ದಾರೆ.

Related posts

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya
error: Content is protected !!