
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಸೋಮನಾಥ ಸಪಲ್ಯ(48) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.






