ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27 ನೇ ವರ್ಷದ ಭಜನಾ ತರಬೇತಿ ಕಮ್ಮಟವು ಸೆ. 14 ರಿಂದ 21 ರವರೆಗೆ ನಡೆಯಲಿದ್ದು ಇದರ ಪೂರ್ವಬಾವಿ ಸಭೆಯು ಬೆಳ್ತಂಗಡಿ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಯಿತು.


ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಕೋಟ್ಯಾಂತರ ಭಕ್ತರ ಆರಾಧ್ಯ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಮಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಎಂದು ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಅಧ್ಯಕ್ಷ ವೆಂಕಟೇಶ್ ಭಟ್ ಕಜೆ,
ಪ್ರಗತಿಬಂಧು ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷರಾದ ಸೀತಾರಾಮ್, ಬೆಳ್ತಂಗಡಿ ಯೋಜನಾಧಿಕಾರಿಗಳಾದ ಯಶೋಧರ್, ಹಾಗೂ ಗುರುವಾಯನಕೆರೆ ಯೋಜನಾಧಿಕಾರಿಗಳಾದ ಅಶೋಕ್ ಬಿ, ಹರೀಶ್ ಕುಮಾರ್,ಜಗದೀಶ್ ರೈ ಮೈರಾ, ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಎಲ್ಲಾ ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

ಕುಮಾರಿ ಮಾನ್ಯ ಪ್ರಾರ್ಥನೆ ಹಾಡಿದರು. ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

Related posts

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya
error: Content is protected !!