23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು (ಆಗಸ್ಟ್ 07) 2025-26 ನೇ ಸಾಲಿನ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು.

ವ್ಯಕ್ತಿತ್ವ ವಿಕಸನ ತರಬೇತುದಾರ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಸೈಕಾಲಜಿ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಒತ್ತಡ ನಿಭಾಯಿಸುವ ಸಾಮರ್ಥ್ಯ, ಸಮಯದ ನಿರ್ವಹಣೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಅವರು ಮಾಹಿತಿ ನೀಡಿದರು.

ವಿಕಸನ ಹಾಗೂ ಮನೋವಿಜ್ಞಾನಕ್ಕೆ ಸಂಬಂಧಿಸಿದ ವೀಡಿಯೊ ತುಣುಕುಗಳ ಮೂಲಕ ವಿದ್ಯಾರ್ಥಿನಿಯರಿಗೆ ಅರ್ಥ ಆಗುವ ರೀತಿಯಲ್ಲಿ ಮಾಹಿತಿ ನೀಡಿದರು..

ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಕಾರ್ಯಕ್ರಮ ನಿರೂಪಿಸಿ ಎಲ್ಲರನ್ನೂ ಸ್ವಾಗತಿಸಿದರು.

Related posts

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!