September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಹಾಗೂ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಬೀತಿಯನ್ನುಂಟುವಂತಹ ಹೇಳಿಕೆಗಳನ್ನು ಪ್ರಚಾರ ಮಾಡಿರುವ ವಿಷಯದಲ್ಲಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ (32) ಎಂಬವರು ನೀಡಿದ ದೂರಿನಂತೆ ಗಿರೀಶ್ ಮಟ್ಟಣ್ಣವರ್ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.6 ರಂದು ರಾತ್ರಿ ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಗಿರೀಶ್ ಮಟ್ಟಣ್ಣವರ್ ರವರು ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವೀಡಿಯೋವನ್ನು ಪೇಸ್ಬುಕ್‌ ನಲ್ಲಿ ಪ್ರಸಾರಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ಚರಣ್ ಶೆಟ್ಟಿ ಎಂಬವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣಾ ಅಕ್ರ: 78/2025 ಕಲಂ:57, 296 ಜೊತೆಗೆ 190 ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಆ. 7 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ನೋಡುತ್ತಿದ್ದಾಗ, ಮಹೇಶ್ ತಿಮರೋಡಿರವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ನಲ್ಲಿ, ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಬೀತಿಯನ್ನುಂಟುವಂತಹ ಹೇಳಿಕೆಗಳನ್ನು ಪ್ರಚಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ಚರಣ್ ಶೆಟ್ಟಿ ಎಂಬವರು ದೂರಿನ ಮೇರೆಗೆ ಬೆಳ್ತಂಗಡಿ ಠಾಣಾ ಅಕ್ರ: 79/2025 ಕಲಂ: 353(2) ಬಿಎನ್ಎಸ್ -2023ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!