26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಜೀವನ ಕೌಶಲಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ತರಬೇತುಗಾರರಾಗಿ ಸುನಿಲ್ ಪಂಡಿತ್, ಪ್ರಾಂಶುಪಾಲರು, ಎಸ್ ಡಿ ಎಂ ರೆಸಿಡೆನ್ಶಿಯಲ್ ಕಾಲೇಜ್, ಉಜಿರೆ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಸಮಸ್ಯೆಗಳನ್ನು ಎದುರಿಸುವುದು, ನಿರ್ಧಾರ ತೆಗೆದುಕೊಳ್ಳುವುದು, ಸಮನ್ವಯತೆ, ಸಂವಹನ ಕೌಶಲಗಳು ಮತ್ತು ಭಾವನೆಗಳ ನಿಯಂತ್ರಣ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು.


ನಂತರ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಯವರು ಮಾತನಾಡಿ ಇಂತಹ ತರಬೇತಿಗಳು ಮಕ್ಕಳಲ್ಲಿ ಹೊಸ ಹುರುಪನ್ನು ತರುತ್ತದೆ ಎಂದು ಮಕ್ಕಳಿಗೆ ಮನದಟ್ಟು ಮಾಡಿದರು. ಹತ್ತನೇ ತರಗತಿಯ ಸಿಂಧೂರ ನಿರ್ವಹಿಸಿದ ಕಾರ್ಯಕ್ರಮದಲ್ಲಿ, ಕುಮಾರಿ ನಿವೇದಿಯ ಸ್ವಾಗತಿಸಿ ಕುಮಾರಿ ಆಶ್ರೀತಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.

Related posts

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!