31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಸ್ವದೇಶಿ ಚಳವಳಿಯ ನೆನಪಿಗಾಗಿ 2015 ರ ಆಗಸ್ಟ್‌ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಿದ್ದರು.

ಆ 07 ರಂದು ರಾಷ್ಟ್ರೀಯ ಕೈಮಗ್ಗದ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಲಾಯಿಲದಲ್ಲಿರುವ ಸಿರಿ ಗ್ರಾಮೋದ್ಯೋಗ ಸಂಸ್ಥೆ ಗೆ ತೆರಳಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಖಾದಿಯ ಬಟ್ಟೆಗಳನ್ನು ಖರೀದಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾಜಯಂತ್ ಹಾಗೂ ಶ್ರೀಮತಿ ತುಳಸಿ ಉಮೇಶ್ ಸದಸ್ಯರಾದ ಶ್ರೀಮತಿ ರಶ್ಮಿ ಪಟವರ್ಧನ್ ಹಾಗೂ ಶ್ರೀಮತಿ ಶ್ರೀಲಕ್ಷ್ಮಿ ರಾವ್ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!