25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.8ರಂದು ಎರಡು ಪ್ರಕರಣ ದಾಖಲು ಮಾಡಲಾಗಿದೆ.

ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51ವ) ಎಂಬವರ ದೂರಿನಂತೆ, ಸದ್ರಿಯವರು ಆ.8 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಪರಿಶೀಲಿಸುತ್ತಿರುವಾಗ, ರಾಕೇಶ್ ಶೆಟ್ಟಿ ಎಂಬಾತನು, ಯೂಟ್ಯೂಬ್‌ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 81/2025 ಕಲಂ 296 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ದಯಾನಂದ ( 44 ವ) ಎಂಬವರು, ಆ.8 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಪರಿಶೀಲಿಸುತ್ತಿರುವಾಗ, sandya voice for justice ಎಂಬ ಪೇಸ್ ಬುಕ್ ಪೇಜ್ ನಲ್ಲಿ, ಸದ್ರಿ ಪೆಜ್ ನ್ನು ಹೊಂದಿರುವ ವ್ಯಕ್ತಿಯು, ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ ಎಂಬುದಾಗಿ ನಿಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 82/2025 ಕಲಂ: 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!