September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಆ. 3 ರಂದು ಸಂಘದ ಸಭಾ ಭವನದಲ್ಲಿ ನಡೆಯಿತು.

2024-25 ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಜಗದೀಶ್ ಪೂಜಾರಿ ಸಭೆಗೆ ಮಂಡಿಸಿದರು.ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್ ವಾರ್ಷಿಕ ಲೆಕ್ಕಪತ್ರ ಮಂಡನೆ ಮಾಡಿದರು. 2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಲಾಯಿತು.

ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ಸಂಘವು ಕಳೆದ 46 ವರ್ಷಗಳ ಪರಂಪರೆ ಹೊಂದಿದ್ದು ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.ಇಗಾಗಲೇ ಸಂಘದ ಸಭಾ ಭವನಕ್ಕೆ ಅತೀ ಅಗತ್ಯವಾಗಿ ಬೇಕಾಗಿರುವ ಅಡುಗೆ ಕೋಣೆಯ ಕೆಲಸ ಪ್ರಗತಿಯಲ್ಲಿದೆ.ಸಂಘದ ಆಡಳಿತ ಮಂಡಳಿ ಹಾಗೂ ಯುವ ಬಿಲ್ಲವ ವೇದಿಮೆ,ಮಹಿಳಾ ಬಿಲ್ಲವ ವೇದಿಕೆ ಹಾಗೂ ಸದಸ್ಯರ ಸಹಕಾರದಿಂದ ಇನ್ನಷ್ಟು ಕೆಲಸ ಕಾರ್ಯಕ್ರಮಗಳು ನಡೆಯಲಿ ಎಂದರು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ನಿರ್ದೇಶಕರಾದ ಸಂತೋಷ್ ಕುಮಾರ್, ದಿನೇಶ್ ಅಂತರ, ಜಗದೀಶ್ ತಾರಿಪಡ್ಪು,ಯತೀಶ್ ವೈ‌ಎಲ್,ರಂಜಿತ್ ಪೂಜಾರಿ ಮಜಲಡ್ಡ,ಪ್ರವೀಣ್ ಡಿ ಕೋಟ್ಯಾನ್,ಪ್ರದೀಪ್ ಮೈಂದಕುಮೇರ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಉಪಸ್ಥಿತರಿದ್ದರು.

ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಪ್ರವೀಣ್ ಕುಮಾರ್ ಹೆಚ್.ಎಸ್ ಸ್ವಾಗತಿಸಿ, ವಂದಿಸಿದರು.

ನೂತನ‌ ಸಮಿತಿ ರಚನೆ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ರಿ ಬಳಂಜ ಇದರ 2025-27 ನೆರ ಸಾಲಿನ ನೂತನ‌ ಸಮಿತಿಯನ್ನು ರಚನೆ ಮಾಡಲಾಯಿತು. ಸಮಿತಿಗೆ 18 ಜನರ ಆಡಳಿತ ಮಂಡಳಿಯನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಎರಡನೇ ಅವಧಿಗೆ ಪುನರಾಯ್ಕೆಯಾದರು.ಉಪಾಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ,ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಹೆಚ್.ಎಸ್,ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಹಾಗೂ ನಿರ್ದೇಶಕರನ್ನು ಆಯ್ಕೆಗೊಳಿಸಲಾಯಿತು.

Related posts

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya
error: Content is protected !!