28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆ. 8 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸಂಸ್ಥೆಯ ಸಂಸ್ಥಾಪಕ ಕೆ ವಿನಾಯಕರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ಪಿ, ಕಾರ್ಯದರ್ಶಿ ಗಣೇಶ್ ಬಜಿಲ, ಉಪಾಧ್ಯಕ್ಷ ಅರುಣ್ ನಾಯ್ಕ್, ಸಂಯೋಜಕ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಚೇತನ್ ಗುಡಿಗಾರ್, ಉಪಾಧ್ಯಕ್ಷ ಗೋವಿಂದ ಸುವರ್ಣ ಪೊಂಗರು, ಸದಸ್ಯ ಮಹಾಬಲ ನಾಯ್ಕ ಮತ್ತು ಉಮೇಶ ಆಚಾರ್ಯ ಉಪಸ್ಥಿತರಿದ್ದರು.

Related posts

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya
error: Content is protected !!