March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 12 ವಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ತಂಡಗಳು ಈಗಾಗಲೇ ರಚನೆಯಾಗಿದ್ದು ಆ.7 ರಂದು ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪ್ರಿಯ ಆಗ್ನೇಸ್ ಹಾಗೂ ಅಭಿವೃದ್ಧಿ ಯೋಜನಾಧಿಕಾರಿಗಳು ಹಿರಿಯ ವಿದ್ಯಾರ್ಥಿಗಳ ತಂಡದ ರಚನೆ ಮಹತ್ವ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಂಗನವಾಡಿ ಕೇಂದ್ರದ ಭದ್ರ ಬುನಾದಿಯಾಗಿದೆ. ಅಂಗನವಾಡಿಯ ಅಭಿವೃದ್ಧಿಗೆ ಇಲಾಖೆಯ ಸಹಕಾರದೊಂದಿಗೆ ಹಿರಿಯ ವಿದ್ಯಾರ್ಥಿಗಳ ತಂಡದ ಸಹಕಾರ ಅತ್ಯಗತ್ಯವಾಗಿದೆ ಅಂಗನವಾಡಿ ಉಳಿವಿಕೆಗೆ ಹಿರಿಯ ವಿದ್ಯಾರ್ಥಿಗಳ ತಂಡ ಬಲವಾಗಿ ನಿಲ್ಲಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಸಂದೀಪ್ ರವರ ಕಾರ್ಯಕ್ರಮದ ಉದ್ಘಾಟಕರಾಗಿ ಹಿರಿಯ ವಿದ್ಯಾರ್ಥಿಗಳು ಅಂಗನವಾಡಿ ಅಭಿವೃದ್ಧಿಗೆ ಕೊಡುಗೆಗಳನ್ನು ನೀಡಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಮತಿ ವಾಣಿಶ್ರೀ ಹಿರಿಯ ಮೇಲ್ವಿಚಾರಕಿ ಸ್ವಾಗತಿಸಿದರು. ಶ್ರೀಮತಿ ಸುಮನ ಮೇಲ್ವಿಚಾರಕಿ ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಅನ್ನಪೂರ್ಣ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು. ಕು.ಲಲಿತ ಮೇಲ್ವಿಚಾರಕಿ ಆಟದ ಮೂಲಕ ವಿದ್ಯಾರ್ಥಿಗಳನ್ನು ಪರಿಚಯ ಮಾಡಿಸಿದರು. ಶ್ರೀಮತಿ ಗುಲಾಬಿ ಮೇಲ್ವಿಚಾರಕಿ ವಂದಿಸಿದರು.

Related posts

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!