ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ


ಬೆಳ್ತಂಗಡಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಾರಾಯಣ ಗೌಡ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಸೋಲು ಗೆಲುವಿನ ಬಗ್ಗೆ ಯೋಚಿಸದೆ ಕ್ರೀಡಾ ಸ್ಪೂರ್ತಿಯಿಂದ ತೊಡಗಿಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕು ಕ್ರೀಡಾ ಸಯೋಜಕರಾದ ಸಂದೀಪ್ ಕುಮಾರ್, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯರಾದ ಲಕ್ಷ್ಮಿನಾರಾಯಣ ಕೆ ಉಪಸಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಸುಧೀರ್ ಕೆ. ಎನ್ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಕಾಮಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!