25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

ಬೆಳ್ತಂಗಡಿ : ಆ.6 ರಂದು ಧಮ೯ಸ್ಥಳದ ಪಾಂಗಳ ಎಂಬಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯೂಟ್ಯೂಬರ್‌ಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳು ಮತ್ತು ಮೈಸೂರು ವಿಭಾಗೀಯ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ತನಿಖೆಯ ಹಾದಿ ತಪ್ಪಿಸುವ ದುರುದುದ್ದೇಶದಿಂದ ಸ್ಥಳೀಯ ಕಿಡಿಗೇಡಿಗಳು ಚೆನ್ನರಾಯಪಟ್ಟಣದ ದಲಿತ ಸಮುದಾಯದ ಯೂಟ್ಯೂಬರ್ ಅಭಿಷೇಕ್ ಸಹಿತ ನಾಲ್ಕು ಮಂದಿಗಳ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ್ದಾರೆ ಹಾಗೂ ಕ್ಯಾಮೆರಾ, ವಾಹನ ಇನ್ನಿತರ ಸಲಕರಣೆಗಳಿಗೆ ಹಾನಿ ಮಾಡಿದ್ದಾರೆ. ಸಂವಿಧಾನದ ನಾಲ್ಕನೇಯ ಅಂಗವೆಂದೇ ಕರೆಯಲ್ಪಡುವ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಖಂಡಿಸಿದರು.

ಗಾಯಗೊಂಡ ಇತರೆ ಮಾಧ್ಯಮದವರ ಆರೋಗ್ಯ ವಿಚಾರಿಸಿ ಅವರಿಗೆ ನ್ಯಾಯ ಒದಗಿಸುವ ಸಲುವಾಗಿ ಈ ಬಗ್ಗೆ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಾಗುವುದು ಎಂದು ದಸಂಸ ನಾಯಕರು ತಿಳಿಸಿದರು. ನಿಯೋಗದಲ್ಲಿ ಬೆಳ್ತಂಗಡಿಯ ಪ್ರಮುಖರಾದ ಶೇಖರ್ ಕುಕ್ಕೇಡಿ, ರಮೇಶ್ ಆರ್, ಬಿ.ಕೆ.ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರು ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ,ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!