September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ ಕಾರಂತ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ಗುಣಶ್ರೀ ಶಾಲೆಯ ಯೋಗ ಶಿಕ್ಷಕಿ ಶ್ರೀಮತಿ ಶಶಿಕಲಾ ರವರು ಸಂಸ್ಕೃತಿ, ಸಂಸ್ಕಾರ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಯೋಜನೆಯಿಂದ ಅದ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ಬಗ್ಗೆ ತಿಳಿಸಿದರು, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರಾದ ಸಂಗೀತ ಹಾಗೂ ಉಷಾ ರವರು ಹಾಗೂ ಒಕ್ಕೂಟ ಅಧ್ಯಕ್ಷರು ಸದಾನಂದ ಪೂಜಾರಿ, ಹಾಗೂ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿ ಸೌಜನ್ಯ ಜೈನ ವರದಿ ವಾಚಿಸಿದರು ಒಕ್ಕೂಟ ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಸ್ವಾಗತಿಸಿ ಸೇವಾಪ್ರತಿನಿಧಿ ಹರೀಶ್ ಬಾಡರು ರವರು ಧನ್ಯವಾದ ವಿತ್ತರು.

Related posts

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!