30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಆ.10 ರಿಂದ 12ರ ವರೆಗೆ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ.

ಆ.10 ರಂದು ಬೆಳ್ತಂಗಡಿ ನೋಟರಿ ವಕೀಲ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಮರಳಿ ಬಿ., ಬೆಳ್ತಂಗಡಿ ಆರಕ್ಷಕ ಠಾಣೆಯ ಪೋಲಿಸ್ ನಿರೀಕ್ಷಕ ಬಿ.ಜಿ.ಸುಬ್ಬಾಪುರ ಮಠ ಹಾಗೂ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಅಧ್ಯಕ್ಷ ರಾಜ್‌ಪ್ರಸಾದ್ ಪೊಳ್ನಾಯ ದೀಪ ಪ್ರಜ್ವಲನೆ ಮಾಡಲಿರುವರು. ಮುಖ್ಯ ಅತಿಥಿಯಾಗಿ ಲಾಯಿಲ ಗ್ರಾ.ಪಂ.ಉಪಾಧ್ಯಕ್ಷ ಸುಗಂಧಿ ಜಗನ್ನಾಥ್ ಭಾಗವಹಿಸಲಿದ್ದಾರೆ.

ಆ.11 ರಂದು 11.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಪ್ರತಿಷ್ಠಾನದ ಅಧ್ಯಕ್ಷ ಬಿ.ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಹೊಸಪೇಟೆ ವಿಧಾಸಭಾ ಸದಸ್ಯ ಎಚ್.ಆರ್. ಗವಿಯಪ್ಪ, ಗಂಗಾವತಿ ಶಾಸಕ ಹೆಚ್.ಎಸ್. ಮುರಳೀಧರ್, ವಿಧಾನ ಪರಿಷತ್ ಸದಸ್ಯ ಹೆಚ್.ಆರ್.ಶ್ರೀನಾಥ್, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ ಹಾಗೂ ಚಿಕ್ಕಬಳ್ಳಾಪುರ ಶ್ರೀ ನಾಗನಾಧೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ವಿಜಯರತ್ನ ಪ್ರಶಸ್ತಿ ಪುರಸ್ಕೃತ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಭಜನಾ ಕಾರ್ಯಕ್ರಮ, ಭಕ್ತಿ ರಸಮಂಜರಿ ಜರುಗಲಿದೆ.

Related posts

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!