38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ಆ.9ರಂದು ಡೈಮಂಡ್ ಫೆಸ್ಟ್‌ ಗೆ ಚಾಲನೆ ನೀಡಲಾಯಿತು.

ಬೆಳ್ತಂಗಡಿ ಮಹಿಳಾ ಉದ್ಯಮಿ ಪ್ರೀತಿ ರತೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಮುಳಿಯ ಸಂಸ್ಥೆಯಲ್ಲಿ ಹೊಸ ಹೊಸ ವಿನ್ಯಾಸದ ಆಭರಣಗಳ ಸಂಗ್ರಹಗಳಿದ್ದು ಗ್ರಾಹಕರಿಗೆ ಖುಷಿ ತಂದಿದೆ. ಮುಳಿಯದ ಎಲ್ಲಾ ಕುಶಲಕರ್ಮಿಗಳಿಗೆ ಹಾಟ್ಸ್ ಆಫ್ ಹೇಳಲೇಬೇಕು. ಯಾಕೆಂದರೆ ಪ್ರತಿ ಬಾರಿಯೂ ಬಂದಾಗ ಡಿಸೈನ್ ಗಳು ಬದಲಾವಣೆಗಳು ಆಗುತ್ತಿದ್ದು ಒಂದಕ್ಕೊಂದು ಆಕರ್ಷಣೆಯಾಗಿರುತ್ತದೆ. ಈ ಶ್ರಾವಣ ಮಾಸದ ಶನಿವಾರದಂದು ಪ್ರಾರಂಭ ಮಾಡಿರುವ ಡೈಮಂಡ್ ಫೆಸ್ಟ್ ಮಾರುಕಟ್ಟೆಯಲ್ಲಿ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿ ಇಂದಬೆಟ್ಟು ಗ್ರಾಮ ಆಡಳಿತ ಅಧಿಕಾರಿ ಅಂಕಿತ್ ಜೈನ್ ಮಾತನಾಡಿ, ಮುಳಿಯ ಸಂಸ್ಥೆ ಹಲವಾರು ವರ್ಷಗಳಿಂದ ತನ್ನ ಗ್ರಾಹಕರನ್ನು ಸೆಳೆಯುತ್ತಲೇ ಬಂದಿರುತ್ತದೆ. ನಾನು ಕಳೆದ ಎರಡು ವರ್ಷದಿಂದ ಮುಳಿಯ ಸಂಸ್ಥೆಯ ಗ್ರಾಹಕನಾಗಿದ್ದು, ನಮ್ಮ ನಿರೀಕ್ಷೆಯ ಡಿಸೈನ್ ಗಳು ಇಲ್ಲಿ ದೊರೆಯುತ್ತಿದೆ. ಎಲ್ಲಾ ಸಿಬ್ಬಂದಿಗಳು ವಿನಮ್ರವಾಗಿದ್ದು ಮತ್ತೆ ಮತ್ತೆ ಬರಬೇಕು ಎಂದು ಭಾಸವಾಗುತ್ತದೆ. ಯಾವುದೇ ಹಬ್ಬಗಳ ಸಂಭ್ರಮದಂದು ನಮಗೆ ಮುಳಿಯ ನೆನಪಾಗುತ್ತಿದ್ದು ಡೈಮಂಡ್ ಫೆಸ್ಟ್ ಯಶಸ್ಸಾಗಲಿ ಎಂದು ಶುಭ ಹಾರೈಸಿದರು.

ಹಲವು ವಿನ್ಯಾಸದ ವಜ್ರದ ಸಂಗ್ರಹಣೆ:
81 ವರ್ಷಗಳ ಇತಿಹಾಸವಿರುವಂತಹ ಮುಳಿಯ ಸಂಸ್ಥೆ ಸುಂದರ ಅರಮನೆಯ ಕಿರೀಟಕ್ಕೆ ಇಂದು ಮತ್ತೊಂದು ಸಾಧನೆಯ ಗರಿಯ ಜೋಡಿಸುವ ಸಂಭ್ರಮ. ವಜ್ರಗಳ ವಿವಿಧ ವಿನ್ಯಾಸಗಳನ್ನು ಸಂಭ್ರಮಿಸುವ ದಿನ. ಸುಮಾರು 4000 ಸಾವಿರದಿಂದ ಪ್ರಾರಂಭವಾಗುವಂತಹ ವಜ್ರದ ಬೆಲೆಯು ಹಲವು ವಿನ್ಯಾಸ ಮತ್ತು ವೈವಿಧ್ಯತೆಯನ್ನೊಳಗೊಂಡು 1 ಲಕ್ಷದವರೆಗೂ ಮುಂದುವರೆಯುತ್ತದೆ. ದಕ್ಷಿಣ ಕನ್ನಡದಲ್ಲಿ ಮೊದಲ ಬಾರಿಗೆ ವಜ್ರದ ಗುಣಮಟ್ಟವನ್ನು ಗ್ರಾಹಕರಿಕೆ ತಿಳಿಸುವಂತಹ ಯಂತ್ರವೂ ಕೂಡ ಮುಳಿಯದಲ್ಲಿದೆ. ಹಲವು ವಿನ್ಯಾಸದ ವಜ್ರದ ಸಂಗ್ರಹಣೆಯ ಹಬ್ಬ ಇಂದಿನಿಂದ ಪ್ರಾರಂಭವಾಗಲಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ಸ ಗ್ರಾಹಕರು, ಶಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಖಾ ಪ್ರಬಂಧಕರು ಲೋಹಿತ್ ಸ್ವಾಗತಿಸಿದರು. ಸಿಬ್ಬಂದಿ ಅಕ್ಷಯ್ ಪ್ರಾರ್ಥಿಸಿ ವಂದಿಸಿದರು. ಸೋನಾಕ್ಷಿ ನಿರೂಪಿಸಿದರು.

Related posts

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya
error: Content is protected !!