September 6, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಇಂದಬೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ

ಇಂದಬೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಇಂದಬೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ರಾಮಣ್ಣ ಗೌಡ ದೇರೆಮಾರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಪರಿಷತ್ ಪ್ರತಾಪಸಿಂಹ ನಾಯಕ್ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು

ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವರ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು,ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ ಬೈಠಕ್ ನೀಡಿದರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್, ಅಭ್ಯಾಸ ವರ್ಗ ಪ್ರಮುಖ್ ಕೊರಗಪ್ಪ ಗೌಡ ಚಾರ್ಮಾಡಿ, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು, ಇಂದಬೆಟ್ಟು ಶಕ್ತಿ ಕೇಂದ್ರ ಪ್ರಮುಖ್ ಶ್ರೀಕಾಂತ್.ಎಸ್. ಇಂದಬೆಟ್ಟು, ಇಂದಬೆಟ್ಟು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಜನಪ್ರತಿನಿದಿನಗಳು ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಆನಂದ ಅಡಿಲು ಕಾರ್ಯಕ್ರಮ ನಿರ್ವಹಿಸಿದರು.

Related posts

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya
error: Content is protected !!