March 7, 2026
ಅಪರಾಧ ಸುದ್ದಿವರದಿ

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

ಬೆಳ್ತಂಗಡಿ: ಮೂಡಿಗೆರೆ – ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡುಗಳಲ್ಲಿ ನಡೆದುಹೋಗುತ್ತಿದ್ದ ಈ ಟ್ರಕ್ಕಿಂಗ್ ಕಾರ್ಯಕ್ರಮವು ಅರಣ್ಯ ಕಾಯ್ದೆಗಳಿಗೆ ವಿಳಂಬವಾಗಿದ್ದು, ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆಗಳ ಸಂಯುಕ್ತ ಕಾರ್ಯಾಚರಣೆಯಿಂದ ಈ ದಾಳಿ ಯಶಸ್ವಿಯಾಗಿ ನಡೆಸಲಾಯಿತು. ಬಣಕಲ್ ಪಿಎಸ್‌ಐ ರೇಣುಕಾ ಹಾಗೂ ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರವಾಸಿಗರನ್ನು ಬಂಧಿಸಲಾಯಿತು.

ಬಂದೋಬಸ್ತಿನ ಭಾಗವಾಗಿ ಸ್ಥಳದಲ್ಲಿ ಇಟ್ಟಿದ್ದ ಎರಡು ಪ್ರವಾಸಿ ಬಸ್ಸುಗಳು ಮತ್ತು ಎರಡು ಪಿಕಪ್ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಟ್ರಕ್ಕಿಂಗ್‌ನಲ್ಲಿ ಭಾಗವಹಿಸಿದ್ದವರು ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ. ಪ್ರವಾಸಿಗರನ್ನು ನಿಷೇಧಿತ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿಯೊಬ್ಬ ಎಂಬ ಮಾಹಿತಿ ಲಭ್ಯವಾಗಿದೆ.

ಅರಣ್ಯ ಇಲಾಖೆಯ ಪೂರ್ವಾನುಮತಿ ಇಲ್ಲದೆ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುುವುದು ಅರಣ್ಯ ಕಾಯ್ದೆಯ ಉಲ್ಲಂಘನೆ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನೈಸರ್ಗಿಕ ಸಂಪತ್ತು ಹಾಗೂ ವನ್ಯಜೀವಿ ಸಂರಕ್ಷಣೆಗೆ ಪ್ರಮುಖವಾದ ಈ ಪ್ರದೇಶದಲ್ಲಿ, ಅನಧಿಕೃತ ಪ್ರವೇಶದಿಂದ ಪರಿಸರದ ಮೇಲೆ ಹಾನಿಯಾಗುವ ಸಾಧ್ಯತೆ ಇದೆ.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya
error: Content is protected !!