25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

ಮುಂಡಾಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಮಲ್ಲಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ಅನ್ನಪೂರ್ಣರವರು ಪ್ರತಿಯೊಬ್ಬರೂ ಆರೋಗ್ಯವಂತರಾಗಿರಬೇಕಾದರೆ ಪೌಷ್ಟಿಕಾಂಶ ಯುಕ್ತ ಆಹಾರವನ್ನು ಸೇವಿಸಬೇಕು ಹಿಂದಿನ ಕಾಲದಲ್ಲಿ ಬಡತನವಿದ್ದು ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುತ್ತಿದ್ದು ಆರೋಗ್ಯವಂತರಾಗಿರುತ್ತಿದ್ದರು. ಈಗ ನಾವುಗಳು ಆಟಿ ತಿಂಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸುವುದರ ಮೂಲಕ ಹಿಂದಿನ ಕಾಲದ ಆಹಾರ ಪದ್ಧತಿಯನ್ನು ನೆನಪು ಮಾಡಿಕೊಳ್ಳುತ್ತಿದ್ದೇವೆ ಎಂದರು.

ಕೀರ್ತನ ಕಲಾ ತಂಡದ ಅಧ್ಯಕ್ಷ ಸದಾನಂದ ರವರು ಆಟಿ ತಿಂಗಳ ವಿಶೇಷತೆಯ ಬಗ್ಗೆ ಹಿಂದಿನ ಕಾಲದ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು ಆಟಿ ತಿಂಗಳಲ್ಲಿ ಕಾರ್ಯಕ್ರಮ ನಡೆಸಿ ಮುಂದಿನ ಪೀಳಿಗೆಗೆ ಹಿಂದಿನ ಕಾಲದ ಪೌಷ್ಟಿಕ ಆಹಾರದ ಬಗ್ಗೆ ಪರಿಚಯಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸೂರಜ್, ಎಸ್.ಡಿ.ಎಮ್.ಸಿ ಅಧ್ಯಕ್ಷೆ ಜ್ಯೋತಿ, ಸಿ ಎ ಬ್ಯಾoಕ್ ಉಪಾಧ್ಯಕ್ಷ ಆನಂದ ಗೌಡ, ಒಕ್ಕೂಟದ ಅಧ್ಯಕ್ಷ ಗೋಪಾಲ ಗೌಡ, ಕೋಶಾಧಿಕಾರಿ ಡೀಕಮ್ಮ, ಸೇವಪ್ರತಿನಿಧಿ ಸುರೇಖಾ ಉಪಸ್ಥಿತರಿದ್ದರು. ಕೇಂದ್ರದ ಸದಸ್ಯರಾದ ಉಮಾವತಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಬೇಬಿ ಸ್ವಾಗತಿಸಿ, ಶುಭಲತ ಧನ್ಯವಾದವಿತ್ತರು.

Related posts

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!