37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

ನಡ: ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ನಡ, ಮಹಿಳಾ ಘಟಕ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವು ಆ. 10ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಯತೀಶ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಹಾಗೂ ಉದ್ಯಮಿಗಳಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರಾಮಣ್ಯ ಗೌಡ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಅಳದಂಗಡಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಹೇಮಲತಾ ಎಂ. ಆಗಮಿಸಿದ್ದರು. ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಶ್ಯಾಮ್ ಸುಂದರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿವೃತ ಪೊಲೀಸ್ ಉಪನೀರಿಕ್ಷಕ ಬಿ.ಪಿ. ಪುರಂದರ ಗೌಡ ಬೋಜಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಿರಿಯ ಮೇಲ್ವಿಚಾರಕರಾಗಿ ನಿವೃತ್ತಿ ಹೊಂದಿರುವ ರತ್ನಾವತಿ ಅವರನ್ನು ಸನ್ಮಾನಿಸಲಾಯಿತು.

2024-25ರ ಸಾಲಿನಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಸ್ವಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿದರು.

Related posts

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya
error: Content is protected !!