ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಆ.10 ರಂದು ನಡೆಯಿತು.

ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ ಉದಯ ನಗರ, ಸುದೆಮುಗೇರು ಪ್ರದೇಶದ ಮಕ್ಕಳು, ಹಿರಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟ ಉದ್ಘಾಟನೆ ಮಾಡಿದರು

ಪುರುಷರು, ಮಕ್ಕಳಿಗೆ ಲಿಂಬೆ ಚಮಚ ಓಟ, ಒಂಟಿ ಕಾಲಿನ ಓಟ, ಹಾಳೆ ಓಟ, ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಈ ಮೊದಲಾದ ಗ್ರಾಮೀಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಿಯಾಝ್ ಸಂಜಯನಗರ ಪಂದ್ಯಾಟವನ್ನು ನಡೆಸಿಕೊಟ್ಟರು. ವಯಸ್ಸಿನ ಮಿತಿಯನ್ನು ಲೆಕ್ಕಿಸದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಹಿರಿಯರು, ಕಿರಿಯರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷರಾದ ಇಸ್ಮಾಯಿಲ್, ಕೋಶಾಧಿಕಾರಿಯಾದ ರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ ಕ್ರೀಡಾಕೂಟವನ್ನು ನಡೆಸಿಕೊಟ್ಟರು.


ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ವಾತಂತ್ರ್ಯ ದಿನದಂದು ಸಂಜಯ್ ಗ್ಲೋಬಲ್ ಫೌಂಡೇಶನ್ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Related posts

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!