September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕ, ಕೆ.ವಿ.ಜಿ ದಂತವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ, ಭಾರತೀಯ ದಂತವೈದ್ಯಕೀಯ ಸಂಘ, ಪುತ್ತೂರು ಮತ್ತು ರೋಟರಿ ಕ್ಲಬ್, ಬೆಳ್ತಂಗಡಿ ಇವರ ಜಂಟಿ ಸಹಭಾಗಿತ್ವದೊಂದಿಗೆ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೊಟರೀ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ ದಂತವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವಸಡು ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ.ದಯಾಕರ್ ಮಾತನಾಡಿ, ಮುಖದಲ್ಲಿರುವ ಹಲ್ಲು ನಮ್ಮ ಸೌಂದರ್ಯಕ್ಕೆ, ಆಹಾರವನ್ನು ಜಗಿಯುವುದಕ್ಕೆ ಮಾತ್ರವಲ್ಲದೆ ನಮ್ಮ ಜೀವನದಲ್ಲಿ ಬಹು ಮುಖ್ಯ ಪಾತ್ರವನ್ನ ವಹಿಸುತ್ತದೆ, ಹಲ್ಲು ಮತ್ತು ವಸಡಿನ ಆರೋಗ್ಯಕ್ಕೆ ಉತ್ತಮ ಆಹಾರ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಭಾರತೀಯ ದಂತವೈದ್ಯಕೀಯ ಸಂಘ ಅಧ್ಯಕ್ಷ ಡಾ.ಆಶಾ ರಾಘವೇಂದ್ರ ಭಾಗವಹಿಸಿ, ಕಾರ್ಯಕ್ರಮಕ್ಕೆ ಶುಭ ನುಡಿದರು.

ಕಾಲೇಜಿನ ಪ್ರಾಂಶುಪಾಲ ಸಂತೋಷ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ., ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಪ್ರಕಾಶ್ ಭಾಗವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಸುಮಾರು 180 ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Related posts

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya
error: Content is protected !!