25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಆ.11 ರಂದು ನಡೆಯಿತು.

ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ, ಗಂಗಾವತಿ ಮಾಜಿ ಶಾಸಕ ಹೆಚ್.ಎಸ್. ಮುರಳೀಧರ್,ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ,ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ,ಚಿಕ್ಕಬಳ್ಳಾಪುರ ಶ್ರೀ ನಾಗನಾಧೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು,ಟ್ರಸ್ಟಿ ಸುಜಿತಾ ವಿ ಬಂಗೇರ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಸನ್ಮಾನ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಹೊಸಪೇಟೆ ಶಾಸಕ ಎಚ್.ಆರ್ ಗವಿಯಪ್ಪ,ಗಂಗಾವತಿ ಮಾಜಿ ಶಾಸಕ ಮುರಳೀಧರ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಅವರನ್ನು ಗೌರವಿಸಲಾಯಿತು. ಭಜನಾ ಕಾರ್ಯಕ್ರಮ, ಭಕ್ತಿ ರಸಮಂಜರಿ ಜರುಗಿತು.

ಪ್ರಸಿದಿ ಪ್ರಾರ್ಥನೆಗೈದರು. ಗೌರವ ಸಲಹೆಗಾರ ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ.ಬಿಎ ಕುಮಾರ ಹೆಗ್ಡೆ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು. ಸುಧಾಮಣಿ ನಿರೂಪಿಸಿದರು.ಸೇವಾ ಪ್ರತಿಷ್ಠಾನದ ಟ್ರಸ್ಟಿಗಳು, ಪದಾಧಿಕಾರಿಗಳು ಸಹಕರಿಸಿದರು.

Related posts

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

Suddi Udaya

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya
error: Content is protected !!