July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇದರ ನೇತೃತ್ವದಲ್ಲಿ ಆ. 10 ರಂದು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ಸದಾನಂದ ಸಾಲಿಯನ್ ಬಳಂಜ ರಕ್ಷಾ ಬಂಧನದ ಕುರಿತು ವಿಶೇಷ ಬೌದ್ಧಿಕ್ ನೀಡಿ ಎಲ್ಲರೂ ಸಹೋದರ ಭಾವದಿಂದ ಜೀವನ ನಡೆಸಿದಾಗ ಸಮಾಜದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಯಾಗಲು ಸಾಧ್ಯವಿದೆ ಎಂದು ನುಡಿದರು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ಕೃಷ್ಣ ಭಜನಾ ಮಂಡಳಿ ಸಂಚಾಲಕರಾದ ಪ್ರಮೋದ್ ಪೂಜಾರಿ ಸೂಳಬೆಟ್ಟು,ಮಂಡಳಿಯ ಅಧ್ಯಕ್ಷೆ ಕು.ಪ್ರಸಿದ್ದಿ ಶೆಟ್ಟಿ, ತರಬೇತುದಾರೆ ಕು.ಮಾನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!