ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

ಶಿರ್ಲಾಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಯುವ ಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಯುವ ವಾಹಿನಿ ಸಂಚಲನ ಸಮಿತಿ ಶಿರ್ಲಾಲು ಕರಂಬಾರು ಇದರ ನೇತೃತ್ವದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವು ಶಿರ್ಲಾಲು ಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ ಊರ ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಹಾಗೂ ಸಂಘದ ಮುಂದಿನ ಸೇವಾ ಚಟುವಟಿಕೆಗಳ ಬಗ್ಗೆ ತಿಳಿಸಿ ಎಲ್ಲರ ಸಹಕಾರ ಕೇಳಿದರು.
ವೇದಿಕೆಯಲ್ಲಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಂ.ಕೆ ಪ್ರಸಾದ್ ಮಾತನಾಡಿ ಆಟಿಯ ಸಂಪ್ರದಾಯ ಆಚರಣೆಗಳನ್ನು ತಿಳಿಸಿದರು.

ವೇದಿಕೆಯಲ್ಲಿ ಶಿರ್ಲಾಲು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜ್ಞಾನೇಶ್ ಪೂಜಾರಿ ಕಟ್ಟ ಹಾಗೂ ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಅಧ್ಯಕ್ಷ ಶಶಿಕಾಂತ್ ಪೊಯ್ಯೇದಂಡ ಮತ್ತು ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶೋಭಾ ಗೋಣಗುರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಜಾತಿ ಬಾಂಧವರು ತಮ್ಮ ಮನೆಯಲ್ಲಿ ಅಟಿಯ ತಿಂಗಳಲ್ಲಿ ಮಾಡುವ ಸುಮಾರು 60 ವಿವಿಧ ಬಗೆಯ ತಿಂಡಿ ತಿನಸುಗಳನ್ನು ತಯಾರಿ ಮಾಡಿದ್ದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮನರಂಜನೆಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಾಡು ಮಾಡಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆಟೋಟ ಸ್ಪರ್ಧೆಯನ್ನು ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಹರೀಶ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಸಹಕಾರ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕರ್ದೋಟ್ಟು ಸ್ವಾಗತಿಸಿ, ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ರೇಖಾ ನೇತ್ರಾಬೈಲ್ ಧನ್ಯವಾದವಿತ್ತರು.

Related posts

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!