September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಫಂಡಿಜೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಆ.11ರಂದು ಅಜ್ಜ-ಅಜ್ಜಿಯಂದಿರ ದಿನವನ್ನು ಆಚರಿಸಲಾಯಿತು.

ಮುಖ್ಯಶಿಕ್ಷಕಿ ಫ್ಲೇವಿಯಾ ಡಿಸೋಜ ಅವರ ಮಾರ್ಗದರ್ಶನದಲ್ಲಿ ಹಿರಿಯರು ನಮ್ಮ ಭರವಸೆ ಎಂಬ ಧ್ಯೇಯ ವಾಕ್ಯದೊಂದಿಗೆ ಶಾಲಾ ಮತ್ತು ಅಂಗನವಾಡಿ ಮಕ್ಕಳು ಹಿರಿಯರ ಮಹತ್ವವನ್ನು ಬಿಂಬಿಸುವ ಕಿರು ನಾಟಕ, ನೃತ್ಯ ಪ್ರದರ್ಶನವನ್ನು ನೀಡಿದರಲ್ಲದೆ, ಅಜ್ಜ-ಅಜ್ಜಿಯಂದಿರಿಗೆ ಕಿರುಕಾಣಿಕೆಯನ್ನು ನೀಡಿ ಗೌರವಿಸಿ ಸಮ್ಮಾನಿಸಿದರು. ಕಾಮಿಡಿ ಡ್ಯಾನ್ಸ್, ಜಾನಪದ ನೃತ್ಯಗಳನ್ನು ಮಕ್ಕಳು ಪ್ರದರ್ಶಿಸಿದರು. ಆಟವನ್ನೂ ಆಡಿಸಲಾಯಿತು.

ಕುಕ್ಕೇಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಅನಿತಾ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸದಸ್ಯರಾದ ದಿನೇಶ್, ಗೀತಾ, ಸಾಮಾಜಿಕ ಕಾರ್ಯಕರ್ತ ಹರ್ಷವರ್ಧನ, ಪ್ರಕಾಶ್ ಕಣಿಲ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸ್ವಾತಿ , ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಸಹ ಶಿಕ್ಷಕಿಯರಾದ ಪೂರ್ಣೀಮಾ ಹೆಬ್ಬಾರ್ ಹಾಗೂ ಸಾವಿತ್ರಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya
error: Content is protected !!