24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಆ.12 ಮಂಗಳವಾರ ಬೆಳಿಗ್ಗೆ ಎಸ್‌ಐಟಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಿಪಿಆರ್ ಮೂಲಕ ಗುರುತಿಸಿದ ಜಾಗದಲ್ಲಿ ಪರಿಶೀಲನೆ ಕಾರ್ಯಾಚರಣೆ ನಡೆಸಲಾಯಿತು.


ಬಹಳಷ್ಟು ಕುತೂಹಲ ಹಾಗೂ ಕ್ಲಿಷ್ಟಕರವಾದ 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ಮುಂದೂಡಲ್ಪಡುತ್ತಿದ್ದು ಇಲ್ಲಿ ಎಳೆಂಟು ಶವಗಳನ್ನು ಹೂತು ಹಾಕಿದ್ದೇನೆ ಎಂದು ದೂರುದಾನ ಹೇಳಿಕೊಂಡ ಹಿನ್ನಲೆಯಲ್ಲಿ ಸ್ಥಳಕ್ಕೆ ಜಿಪಿಆರ್‌ನ್ನು ತರಿಸಲಾಗಿತ್ತು. ನೇತ್ರಾವತಿ-ಅಜೆಕುರಿ ರಸ್ತೆಯಲ್ಲಿ ನೇತ್ರಾವತಿ ನದಿ ಪಕ್ಕದ ಕಿಂಡಿ ಅಣೆಕಟ್ಟಿನ ಸಮೀಪದ 13ನೇ ಸ್ಥಳದಲ್ಲಿ ಸೋಮವಾರ ಮಧ್ಯಾಹ್ನ3 ರಿಂದ 3.30ರ ವರೆಗೆ ಪ್ರಾಯೋಗಿಕ ಕಾರ್ಯಾಚರಣೆ ನಡೆಯಿತು. ಬಳಿಕ ಪೌರ ಕಾರ್ಮಿಕರು ಸುಮಾರು 60 ಅಡಿ ಉದ್ದ, 30 ಅಗಲದ ಈ ಜಾಗದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ, ಪರಿಸರವನ್ನು ಸ್ವಚ್ಛಗೊಳಿಸಿದ್ದರು.


ಸೋಮವಾರ ಬೆಳಿಗ್ಗೆ ಎಸ್‌ಐಟಿ ಅಧಿಕಾರಿಗಳು ದೂರುದಾರನ ಜೊತೆ ಅದೇ ಜಾಗಕ್ಕೆ ಬಂದರು. ಬಳಿಕ ಜಿಪಿಆರ್ ಮೂಲಕ ಜಾಗದಲ್ಲಿ ಪರಿಶೀಲನೆ ನಡೆಸಲಾಯಿತು. ಸುಮಾರು 45 ನಿಮಿಷಗಳ ಕಾಲ ದೂರುದಾರ ಗುರುತಿಸಿದ ಜಾಗ ಹಾಗೂ ಪರಿಸರದಲ್ಲಿ ಪರಿಶೀಲನೆ ಕಾರ್ಯ ನಡೆಯಿತು. ಬಳಿಕ ಅಧಿಕಾರಿಗಳು ಊಟಕ್ಕೆ ತೆರಳಿದರು. ಮಧ್ಯಾಹ್ನ ನಂತರ ಪುನಃ ಸ್ಥಳಕ್ಕೆ ಬಂದು ಎಸ್‌ಐಟಿ ತಂಡ ಜಿಪಿಆರ್ ಮೂಲಕ ಪರಿಶೀಲನೆ ನಡೆಸಿದ ಜಾಗದಲ್ಲಿ ಶವದ ಅವಶೇಷಕ್ಕಾಗಿ ಶೋಧ ಕಾರ್ಯವನ್ನು ಆರಂಭಿಸಿದೆ. ಹಿಟಾಚಿ ಮೂಲಕ ಸ್ಥಳವನ್ನು ಅಗೆಯುವ ಕಾರ್ಯ ಆರಂಭಿಸಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ನೇತ್ರಾವತಿ ಅಜಿಕುರಿ ರಸ್ತೆಯನ್ನು ಸಂಪೂರ್ಣ ಮುಚ್ಚಲಾಗಿದೆ. ರಸ್ತೆಯ ಎರಡೂ ಬದಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿಯೂ ಹೆಚ್ಚಿನ ಪೊಲೀಸರನ್ನು ಹಾಕಿ ಬಂದೋಬಸ್ತ್ ಮಾಡಲಾಗಿದೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya
error: Content is protected !!