ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

ಮಡಂತ್ಯಾರು: ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ ,ಬಂಟರ ಮಹಿಳಾ ಸಮಿತಿ ಮಡಂತ್ಯಾರು ವಲಯ ಇದರ ಆಶ್ರಯದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮ ಆ.10 ರಂದು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀಮತಿ ಶಾರದಾ ಮತ್ತು ವಿಠಲ್ ಶೆಟ್ಟಿ ದಂಪತಿಗಳು ಮೂಡಯೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಡಂತ್ಯಾರು ವಲಯ ಬಂಟರ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ದಿವ್ಯ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ವಿಂಧ್ಯಾ ಎಸ್ ರೈ ಮಾತನಾಡಿ ಆಟಿ ತಿಂಗಳಲ್ಲಿ ಸಂಘಟನೆಗಳು ಇಂತಹ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಸಂಸ್ಕೃತಿ ಆಚಾರ ವಿಚಾರ ಪರಂಪರೆಯನ್ನು ಮುಂದುವರಿಸಿಕೊಂಡು ಬರೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ವಲಯ ಬಂಟರ ಸಂಘ ಅಧ್ಯಕ್ಷ ಕೆ ದಿವಾಕರ ಶೆಟ್ಟಿ ಕಂಗಿತ್ತಿಲು, ಬೆಳ್ತಂಗಡಿ ತಾಲೂಕು ಮಹಿಳಾ ಬಂಟರ ಸಂಘ ಅಧ್ಯಕ್ಷೆ ಜಯಲಕ್ಷ್ಮಿ ಎಸ್ ಸಾಮಾನಿ , ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕ ಎಂ ಜಯರಾಮ ಭಂಡಾರಿ ಧರ್ಮಸ್ಥಳ , ನಳಿನಿ ಎಂ ಪೂಂಜಾ ಮಿಥಿಲಾ ಗರ್ಡಾಡಿ, ಜಯರಾಮ ಶೆಟ್ಟಿ ಮುಂಡಾಡಿ ಗುತ್ತು ಪೂರ್ವಾಧ್ಯಕ್ಷರು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ರಘುರಾಮ್ ಶೆಟ್ಟಿ ಸಾಧನಾ ಉಜಿರೆ ಸಂಘಟನಾ ಸಂಚಾಲಕರು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಲಕ್ಷ್ಮಿ ಸಂಜೀವ ಶೆಟ್ಟಿ ಮುಗೆರೋಡಿ, ಪದ್ಮಾವತಿ ಆರ್ ಶೆಟ್ಟಿ ನೆತ್ತರ ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯತ್ ಮಚ್ಚಿನ, ಸುರೇಶ್ ಶೆಟ್ಟಿ ಬೊಳ್ಳಾಜೆ ವಲಯ ಸಂಚಾಲಕರು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಸಂಗೀತಾ ಅರುಣ್ ಶೆಟ್ಟಿ ಉಪಾಧ್ಯಕ್ಷರು ಮಹಿಳಾ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಉಪಸ್ಥಿತರಿದ್ದರು.

ಶಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ರೇಖಾ ಶೆಟ್ಟಿ ಸ್ವಾಗತಿಸಿದರು. ರಮ್ಯಾ ಶೆಟ್ಟಿ ಧನ್ಯವಾದ ನೀಡಿದರು. ಮಡಂತ್ಯಾರು ವಲಯ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸುಮಾರು 54 ಬಗೆಯ ಆಟಿ ತಿಂಗಳ ವಿವಿಧ ಖಾದ್ಯಗಳೊoದಿಗೆ ಭೋಜನ ವಿಶೇಷವಾಗಿತ್ತು.

ವರದಿ : ಮನು ಮದ್ದಡ್ಕ

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ “ಆಟಿದ ಪೊಲಬು”

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!